ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019
ಕೆಸರುಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟರು..! ರಸ್ತೆ ಗುಂಡಿಯಲ್ಲಿದ್ದ ನೀರಿಗೆ ಕಲರ್ ಕಲರ್ ಮೀನು ಬಿಟ್ಟರು..! ಗಾಳ ಹಾಕಿ ದೊಡ್ಡ ದೊಡ್ಡ ಮೀನು ಹಿಡಿದು ಘೋಷಣೆ ಕೂಗಿದರು..!
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಾದ್ಯಂತ ರಸ್ತೆಗಳು ಗುಂಡಿ ಬಿದ್ದಿವೆ. ಇದನ್ನು ಮುಚ್ಚಲು ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ, ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮಥುರಾ ಪ್ಯಾರಡೈಸ್ ಪಕ್ಕದಲ್ಲಿ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಸಸಿ ನೆಟ್ಟರು, ಗುಂಡಿಯಲ್ಲಿ ತುಂಬಿದ್ದ ಮಳೆ ನೀರಲ್ಲಿ ಮೀನು ಬಿಟ್ಟರು, ಗಾಳ ಹಾಕಿ ಮೀನು ಹಿಡಿಯುವಂತೆ ನಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜಾವತ್, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಭಾರಿ ಗೋಲ್ಮಾಲ್ ಆಗಿದೆ. ಅಧಿಕಾರಿಗಳು, ರಾಜಕಾರಣಿಗಳ ವಿರುದ್ಧ ತನಿಖೆ ನಡೆಸಬೇಕು. ಇನ್ನೊಂದು ವಾರದಲ್ಲಿ ಜಿಲ್ಲೆಯಾದ್ಯಂತ ರಸ್ತೆಗಳನ್ನು ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರ ಮತ್ತು ಜಿಲ್ಲಾಡಳಿತವೆ ಹೊಣೆಯಾಗಲಿದೆ ಎಂದು ಎಚ್ಚರಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]