ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕ ಹಿನ್ನಲೆ, ಶಿವಮೊಗ್ಗದಲ್ಲಿ ಅಭಿಮಾನಿಗಳು 108 ತೆಂಗಿನ ಕಾಯಿ ಒಡೆದು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಮಣ್ಣ ಶ್ರೇಷ್ಠಿ ಪಾರ್ಕ್’ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಸ್ಥಾನದ ಆವರಣದಲ್ಲಿ 108 ತೆಂಗಿನ ಕಾಯಿ ಒಡೆಯಲಾಯಿತು. ಡಿ.ಕೆ.ಶಿವಕುಮಾರ್ ಅವರು ಬಂಧಮುಕ್ತವಾಗಿದ್ದಾರೆ. ಮುಂದೆ ಯಾವುದೆ ರೀತಿಯ ಸಂಕಷ್ಟ ಎದುರಾಗಬಾರದು. ಡಿ.ಕೆ.ಶಿವಕುಮಾರ್ ಅವರಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬರಲಿ ಎಂದು ಕಾರ್ಯರ್ಕತರು ಪೂಜೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಮಾಜಿ ಶಾಸಕ ಪ್ರಸನ್ನಕುಮಾರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]