ಶಿವಮೊಗ್ಗ ಲೈವ್.ಕಾಂ | SHIMOGA | 1 ನವೆಂಬರ್ 2019
ರಾಜ್ಯೋತ್ಸವದ ಸಂದರ್ಭ ನಾಡಧ್ವಜ ಹಾರಿಸದೆ ಅಗೌರವ ತೋರಿಸಲಾಗಿದೆ ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ಸಚಿವ ಈಶ್ವರಪ್ಪ ಅವರ ಸುದ್ದಿಗೋಷ್ಠಿಗೆ ನುಗ್ಗಿ, ದಿಢೀರ್ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲಕಾಲ ಗೊಂದಲ ನಿರ್ಮಾಣವಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿಎಆರ್ ಮೈದಾನದಲ್ಲಿ ಧ್ವಜಾರೋಹಣದ ಬಳಿಕ ಡಿಎಆರ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮಾತು ಮುಗಿಸಿ ಇನ್ನೇನು ಉಪಾಹಾರ ಸೇವಿಸಬೇಕಿತ್ತು. ಈ ವೇಳೆ ದಿಢೀರ್ ನುಗ್ಗಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, ಈಶ್ವರಪ್ಪ ಅವರು ನಾಡಧ್ವಜಕ್ಕೆ ಅಗೌರವ ತೋರಿಸಿದ್ದಾರೆ ಎಂದು ಘೋಷಣೆ ಕೂಗಿದಿರು.
ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಕೂಡಲೆ ಸಭಾಂಗಣದಿಂದ ಹೊರಗೆ ಕರೆದೊಯ್ದು ಬಂಧಿಸಿದರು. ಕನ್ನಡಪರ ಸಂಘಟನೆ ಕಾರ್ಯಕರ್ತರ ದಿಢೀರ್ ಪ್ರತಿಭಟನೆಯಿಂದ ಸಚಿವ ಕೆ.ಎಸ್.ಈಶ್ವರಪ್ಪ ಮುಜುಗರಕ್ಕೀಡಾದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]