ಶಿವಮೊಗ್ಗ ಲೈವ್.ಕಾಂ | SHIMOGA | 1 ನವೆಂಬರ್ 2019
ಶಿವಮೊಗ್ಗ – ತುಮಕೂರು ನಡುವೆ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೆ ಕಾಮಗಾರಿ ಆರಂಭವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 3957 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ – ತುಮಕೂರು ಚತುಷ್ಪಥ ರಸ್ತೆ ಕಾಮಗಾರಿ ನಡೆಯಲಿದೆ. ಭೂಸ್ವಾದೀನ ಪ್ರಕ್ರಿಯೆ ನಡೆಯುತ್ತಿದೆ. ಈ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದರು.
ರಿಂಗ್ ರೋಡ್ ಪ್ಲಾನ್ ರೆಡಿ, ಇನ್ನೊಂದು ವರ್ಷದಲ್ಲಿ ಏರ್’ಪೋರ್ಟ್
ಶಿವಮೊಗ್ಗ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ 19 ಕಿ.ಮೀ ರಿಂಗ್ ರೋಡ್ ನಿರ್ಮಿಸಲಾಗುತ್ತಿದೆ. 430 ಕೋಟಿ ವೆಚ್ಚದ ರಿಂಗ್ ರಸ್ತೆಗೆ ಪ್ಲಾನ್ ಸಿದ್ಧವಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ರಾಜ್ಯ ಸರ್ಕಾರದ ಕೆ.ಸ್.ಐ.ಐ.ಡಿ.ಸಿ ಸಂಸ್ಥೆಯ ಮೂಲಕ 38ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಕಿರುವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೊತ್ತಿಕೊಳ್ಳಲಾಗಿದೆ. ಇನ್ನೊಂದು ವರ್ಷದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಅಂತಾ ಈಶ್ವರಪ್ಪ ಸ್ಪಷ್ಟಪಡಿಸಿದರು.
ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ 1458ಕೋ ರೂ.ಗಳ ವೆಚ್ಚದಲ್ಲಿ 64 ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇನ್ನು, ಜಿಲ್ಲಾ ಪಂಚಾಯತಿ ವ್ಯಾಪ್ತಿಗೊಳಪಡುವ ಜಿಲ್ಲೆಯ 444 ಕೆರೆಗಳನ್ನು ಅಭಿವೃದ್ಧಿಪಡಿಸಲು, ಜಿಲ್ಲಾ ಪಂಚಾಯಿತಿಯಿಂದ 23 ಕೋಟಿ ರೂ. ಪ್ರಸ್ತಾವನೆ ಬಂದಿದೆ. ಕೆರೆಗಳ ದುರಸ್ತಿಗೆ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡಿ, ಕಾಮಗಾರಿಯನ್ನು ಕೂಡಲೇ ಆರಂಭಿಸಲಾಗುವುದೆಂದವರು ನುಡಿದರು.
ಮಹಾನಗರಪಾಲಿಕೆ ಮೇಯರ್ ಲತಾಗಣೇಶ್, ಉಪಮೇಯರ್ ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಅಪರ ಜಿಲ್ಲಾಧಿಕಾರಿ ಅನುರಾಧ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]