ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹೇಮಂತ್.ಎನ್ ಅವರ ಹೆಸರು ಮತ್ತು ಭಾವಚಿತ್ರವನ್ನು ಬಳಸಿಕೊಂಡು ಸೈಬರ್ ವಂಚಕರು ನಕಲಿ ವಾಟ್ಸಾಪ್ (WhatsApp) ಖಾತೆ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಐಎಎಸ್ ಅಧಿಕಾರಿ ಹೇಮಂತ್.ಎನ್ ಅವರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಂಚಕರು ವಿದೇಶಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆ ಬಳಸಿಕೊಂಡು ನಕಲಿ ವಾಟ್ಸಾಪ್ ಖಾತೆ ತೆರೆದಿದ್ದಾರೆ. ಅದಕ್ಕೆ ಸಿಇಒ ಅವರ ಭಾವಚಿತ್ರವನ್ನು ಡಿಪಿಯಾಗಿ ಬಳಸಿಕೊಂಡಿದ್ದಾರೆ. ಈ ನಕಲಿ ಖಾತೆಯ ಮೂಲಕ ವಿವಿಧ ಅಧಿಕಾರಿಗಳಿಗೆ ಮೆಸೇಜ್ಗಳನ್ನು ಕಳುಹಿಸಿ ವಂಚಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
‘ತಮ್ಮ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ’ ಹೇಮಂತ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಕೊಂಡು ಸಿ.ಇ.ಎನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ