ಮುಂಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಮೈಕಲ್‌ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಶಿವಮೊಗ್ಗದ ಯುವತಿ

ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ (Facebook friend) ವ್ಯಕ್ತಿಯೊಬ್ಬ ಮುಂಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವುದಾಗಿ ತಿಳಿಸಿ ಶಿವಮೊಗ್ಗದ ಯುವತಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದಾನೆ. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ : ಫೋನ್‌ ಪೇ ಮಾಡಿ ಗಾಂಧಿ ಬಜಾರ್‌ ಬಂಗಾರದ ವ್ಯಾಪಾರಿಯ ಖಾತೆಯನ್ನೇ ಫ್ರೀಜ್‌ ಮಾಡಿಸಿದ ಗ್ರಾಹಕ..!

Tunga-Nagara-Police-Station-Shimoga

ಖಾಸಗಿ ಕಂಪನಿಯ ಉದ್ಯೋಗಿ ಆಗಿರುವ ಯುವತಿಗೆ ಎರಡು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಮೈಕೆಲ್ ಎಂಬಾತನ ಪರಿಚಯವಾಗಿತ್ತು. ಏಪ್ರಿಲ್ 6 ರಂದು ತನ್ನನ್ನು ಭೇಟಿಯಾಗಲು ಶಿವಮೊಗ್ಗಕ್ಕೆ ಬರುವುದಾಗಿ ಆತ ನಂಬಿಸಿದ್ದ. ಬಳಿಕ ವಾಟ್ಸಾಪ್ ಮೆಸೇಜ್‌ ಮಾಡಿದ್ದ ಆತ ‘ತಾನು ಮುಂಬೈ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ಕಾರಣಗಳಿಂದ ಸಿಲುಕಿಕೊಂಡಿರುವುದಾಗಿ’ ತಿಳಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Tunga-Nagara-Police-Station-Shimoga

ಬಳಿಕ ಮಹಿಳೆಯೊಬ್ಬರು ಕರೆ ಮಾಡಿ ತಾನು ವಿಮಾನ ನಿಲ್ದಾಣದ ಸಿಬ್ಬಂದಿ, ಮೈಕಲ್‌ನನ್ನು ಬಿಡಿಸಿಕೊಳ್ಳಲು ದಂಡ ಪಾವತಿಸಬೇಕು ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಂಬಿದ ಯುವತಿ ಏಪ್ರಿಲ್ 6 ಮತ್ತು 7 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ನೆಟ್ ಬ್ಯಾಂಕಿಂಗ್ ಮತ್ತು ಫೋನ್ ಪೇ ಮೂಲಕ ಹಣ ವರ್ಗಾಯಿಸಿದ್ದರು. ಒಟ್ಟು ₹2,15,000 ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮತ್ತೆ ಹಣಕ್ಕಾಗಿ ಪೀಡಿಸಿದಾಗ ಅನುಮಾನಗೊಂಡ ಯುವತಿ, ಕೂಡಲೇ 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌