ವಿದೇಶದಿಂದ ಹಣದ ನೆರವಿನ ಭರವಸೆ, ಶಿವಮೊಗ್ಗ ಜಿಲ್ಲೆಯ ಮಹಿಳೆಗೆ ಲಕ್ಷ ಲಕ್ಷ ವಂಚನೆ

Published On : ಏಪ್ರಿಲ್ 21, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ವಿದೇಶದಿಂದ ಹಣದ ನೆರವು ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ (Rupees) ವಂಚಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಡಾ. ಅಲೆಕ್ಸ್ ಚಾರ್ಲ್ಸ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿತ್ತು. ಡಾ. ಅಲೆಕ್ಸ್‌ ಚಾರ್ಲ್ಸ್‌ ಅವರು 1,10,000 ಪೌಂಡ್‌ (ಬ್ರಿಟನ್‌ ದೇಶದ ಕರೆನ್ಸಿ) ಹಣ ಹಾಕುವುದಾಗಿ ನಂಬಿಸಿದ್ದರು. ಇದಕ್ಕಾಗಿ ಬ್ಯಾಂಕ್‌ ಖಾತೆಯ ವಿವರಗಳನ್ನು ಪಡೆದುಕೊಂಡಿದ್ದರು. ಮಹಿಳೆಯು ತನ್ನ ಬ್ಯಾಂಕ್‌ ಖಾತೆಯ ವಿವರಗಳನ್ನು ಒದಗಿಸಿದ್ದರು.

Shivamogga-Cyber-Crime-police-station

ನಂತರ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ವಂಚಕರು, 1,10,000 ಪೌಂಡ್‌ ಹಣವನ್ನು ಸೇವಿಂಗ್ಸ್‌ ಬ್ಯಾಂಕ್‌ ಖಾತೆಗೆ ವರ್ಗಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಕೊರಿಯರ್‌ ಮೂಲಕ ಕಳುಹಿಸುತ್ತೇವೆ ಎಂದು ತಿಳಿಸಿದ್ದರು. ಇದಕ್ಕೆ ತೆರಿಗೆ ಮತ್ತು ಶುಲ್ಕಗಳನ್ನು ಪಾವತಿಸಬೇಕು ಎಂದು ತಿಳಿಸಿದ್ದರು. ಇದಕ್ಕಾಗಿ ₹12,52,299 ಹಣವನ್ನ ಮಹಿಳೆಯಿಂದ ವಿವಿಧ ಬ್ಯಾಂಕ್‌ ಖಾತೆಗೆ ವರ್ಗಾಯಿಸಿಕೊಂಡಿದ್ದರು.

ಇದನ್ನೂ ಓದಿ : ಕಂಠಮಟ್ಟ ಕುಡಿದು ಹೊಟ್ಟೆ ತುಂಬಾ ಊಟ ಮಾಡಿ ಬಿಲ್‌ ಕೇಳಿದಾಗ ಬಿಯರ್‌ ಬಾಟಲಿಯಿಂದ ದಾಳಿ

ಇಷ್ಟಾದರು ಪುನಃ ಹಣಕ್ಕಾಗಿ ಬೇಡಿಕೆ ಇಟ್ಟಾಗ ಮಹಿಳೆಗೆ ಅನುಮಾನ ಮೂಡಿದೆ. ವಿಚಾರಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರೆ. ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ 

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 21, 2026

Leave a Comment