ಹೆಣ್ಮಗು ಜನನದ ಖುಷಿಗೆ ಪಟಾಕಿ ಸಿಡಿಸಿದ ವಿಚಾರಕ್ಕೆ ಗಲಾಟೆ, ಮೊಳೆಯಿಂದ ಚುಚ್ಚಿ ವ್ಯಕ್ತಿಗೆ ಹಲ್ಲೆ

ಭದ್ರಾವತಿ: ಹೆಣ್ಣು ಮಗು ಜನಿಸಿದ ಖುಷಿಗೆ ಸಿಡಿಸಿದ ಪಟಾಕಿ (firecrackers) ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಭದ್ರಾವತಿ ನಗರದ ಹೊಸಮನೆಯ ಭೋವಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಇಲ್ಲಿನ ಮನೆಯೊಂದರ ಮುಂದೆ ಪಟಾಕಿ ಸಿಡಿಸುವಾಗ ನೆರೆಹೊರೆಯವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಾಗ್ವಾದ ವಿಕೋಪಕ್ಕೆ ತಿರುಗಿದೆ.

Shivamogga-Police-Jeep

ಇದನ್ನೂ ಓದಿ : ವಿದೇಶದಿಂದ ಹಣದ ನೆರವಿನ ಭರವಸೆ, ಶಿವಮೊಗ್ಗ ಜಿಲ್ಲೆಯ ಮಹಿಳೆಗೆ ಲಕ್ಷ ಲಕ್ಷ ವಂಚನೆ

ಪಟಾಕಿ ಸಿಡಿಸಿದ ಮನೆಯವರು ಪಕ್ಕದ ಮನೆಯ ವ್ಯಕ್ತಿ ಮೇಲೆ ಕಬ್ಬಿಣದ ಮೊಳೆಯಿಂದ ತಲೆ ಮತ್ತು ಬೆನ್ನಿನ ಭಾಗಕ್ಕೆ ಚುಚ್ಚಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳುವನ್ನು ತಕ್ಷಣವೇ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment