ರೈಲ್ವೆ ಸುದ್ದಿ: ಸುರಕ್ಷತಾ ಸಂಬಂಧಿತ ಕಾಮಗಾರಿಗಳ ಹಿನ್ನೆಲೆ ಹಾಸನ ಯಾರ್ಡ್‌ನಲ್ಲಿ ಕೆಲವು ರೈಲು ಸೇವೆಗಳಲ್ಲಿ ಬದಲಾವಣೆ (train cancellations) ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಯಾವ್ಯಾವ ರೈಲು ವ್ಯತ್ಯಯ?
ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026ರ ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ.

ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಂಡಿದೆ. ಈ ರೈಲು ಅರಸೀಕೆರೆ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 56266 ಮೈಸೂರು–ಅರಸೀಕೆರೆ ಪ್ಯಾಸೆಂಜರ್ ರೈಲು ಮಾವಿನಕೆರೆ ಮತ್ತು ಅರಸೀಕೆರೆ ನಡುವಿನ ಸೇವೆ ಭಾಗಶಃ ರದ್ದುಗೊಳ್ಳಲಿದೆ. 2026ರ ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮಾವಿನಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.
ಇದನ್ನೂ ಓದಿ : ಶಿವಮೊಗ್ಗ ಪಾಲಿಕೆ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್, ಅಧಿಕಾರಿಗಳಿಗೆ ಮೆಸೇಜ್
ರೈಲು ಸಂಖ್ಯೆ 16515 ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಬೆಂಗಳೂರು ವಿಭಾಗದಲ್ಲಿ ಸುಮಾರು 65 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


