ಯಶವಂತಪುರ – ತಾಳಗುಪ್ಪ ಮಧ್ಯೆ ಬೇಸಿಗೆ ವಿಶೇಷ ರೈಲು, ವೇಳಾಪಟ್ಟಿ ಪ್ರಕಟ

ರೈಲ್ವೆ ಸುದ್ದಿ: ಬೇಸಿಗೆಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು (special train) ಓಡಿಸಲು ನಿರ್ಧರಿಸಿದೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ವಿಶೇಷ ರೈಲಿನ ವೇಳಾಪಟ್ಟಿ ಏನು?

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಮೇ 01ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಡಲಿದೆ. ಮೇ. 2ರ ಬೆಳಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.

Train-at-Shivamogga-Railway-Station.

ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್  ಮೇ 4ರಂದು ಬೆಳಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.

Train-at-Shivamogga-Railway-Station.

ಎಲ್ಲೆಲ್ಲಿ ರೈಲು ನಿಲುಗಡೆಯಾಗಲಿದೆ?

ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಇದನ್ನೂ ಓದಿ : ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತ ಪ್ರಮುಖ ಅಪ್‌ಡೇಟ್‌ ನೀಡಿದ ರೈಲ್ವೆ ಇಲಾಖೆ

ಎಷ್ಟು ಬೋಗಿಗಳು ಇರಲಿವೆ?

ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದೆ. ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ.

Leave a Comment