ಶಿವಮೊಗ್ಗದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹2,00,000 ಲಕ್ಷ ದಂಡ, ಕಾರಣವೇನು?

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು (prison) ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಏನಿದು ಕೇಸ್?‌ ಯಾವಾಗ ಆಗಿದ್ದು?

ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯ ಮೇಲೆ 30 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Shivamogga-Court-Balaraja-Urs-Road

Shivamogga-Court-Balaraja-Urs-Road

ತನಿಖೆ, ವಿಚಾರಣೆ, ದೋಷಾರೋಪ ಪಟ್ಟಿ

ಪ್ರಕರಣದ ಅಂದಿನ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ತಿಪ್ಪೆಸ್ವಾಮಿ.ಎಂ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಇಲ್ಲಿದೆ ತೀರ್ಪಿನ ಹೈಲೈಟ್ಸ್‌.

  • ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ.
  • ₹2,00,000 ದಂಡ ವಿಧಿಸಲಾಗಿದೆ.
  • ನೊಂದ ಬಾಲಕಿಗೆ ₹1,80,000 ಪರಿಹಾರ ನೀಡಲು ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಚೇಸ್‌ ಮಾಡಿ ಕಾರು ಅಡ್ಡಗಟ್ಟಿದ ಮಹಿಳೆಯರು, ಗ್ಲಾಸ್‌ ಪೀಸ್‌ ಪೀಸ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು