ಶಿವಮೊಗ್ಗ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಕರ್ಯ ಒದಗಿಸುವ ಉದ್ದೇಶದೊಂದಿಗೆ ರಾಜ್ಯದ ಪ್ರತಿ ಮಹಾನಗರ ಪಾಲಿಕೆಗಳ ಅಭಿವೃದ್ಧಿ ಯೋಜನೆಗಳಿಗೆ (development projects) ನಗರಾಭಿವೃದ್ಧಿ ಇಲಾಖೆಯು ₹200 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.
ಬೊಮ್ಮನಕಟ್ಟೆ ‘ಬಿ’ ಬ್ಲಾಕ್ನಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಸುರೇಶ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು

20 ತಿಂಗಳ ಗಡುವು
ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (ಹಂತ-2) ಅಡಿಯಲ್ಲಿ ₹127.5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ 20 ತಿಂಗಳೊಳಗೆ ಈ ಕೆಲಸ ಪೂರ್ಣಗೊಳಿಸಲು ಸಚಿವರು ಸೂಚಿಸಿದ್ದಾರೆ.

ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪ ಅವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ.
– ಭೈರತಿ ಸುರೇಶ್, ನಗರಾಭಿವೃದ್ಧಿ ಸಚಿವ
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡಜನರ ಕಲ್ಯಾಣಕ್ಕೆ ಶ್ರಮಿಸಿದರು. ಅವರ ಹೆಸರನ್ನು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಗೆ ನಾಮಕರಣ ಮಾಡಬೇಕೆಂದು 2016 ರಿಂದ ಪಕ್ಷಾತೀತವಾದ ಬೇಡಿಕೆ ಇತ್ತು. ಇಂದು ಅದು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗಿದೆ.
– ಮಧು ಬಂಗಾರಪ್ಪ, ಸಚಿವ
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ₹490 ಕೋಟಿ ಅವಶ್ಯಕತೆ ಇದೆ. ಕ್ರಿಯಾ ಯೋಜನೆ ತಯಾರಿಸಿದ್ದು ನಗರಾಭಿವೃದ್ಧಿ ಸಚಿವರು ಈ ಬಗ್ಗೆ ಭರವಸೆ ನೀಡಿದ್ದಾರೆ. ಪೌರ ಕಾರ್ಮಿಕರಿಗೆ ವಸತಿ ಯೋಜನೆಯ ಬಾಕಿ ಕಾಮಗಾರಿಗಳಿಗೆ ಅವಶ್ಯವಿರುವ ₹27 ಕೋಟಿ ಅನುದಾನ ಅಗತ್ಯವಿದೆ.
– ಎಸ್.ಎನ್.ಚನ್ನಬಸಪ್ಪ, ಶಾಸಕ
ಇದನ್ನೂ ಓದಿ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSIIDC ಅಧ್ಯಕ್ಷರ ಭೇಟಿ, ಎರಡು ಮಹತ್ವದ ಘೋಷಣೆ
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಗೋಪಾಲಕೃಷ್ಣ ಬೇಳೂರು, ಶಾರದಾ ಪೂರ್ಯಾನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಿ.ಎಸ್. ಅರುಣ್, ಉಸ್ತುವಾರಿ ಜಿಲ್ಲಾಧಿಕಾರಿ ಹೇಮಂತ್.ಎನ್, ಎಸ್.ಪಿ. ನಿಖಿಲ್.ಬಿ ಸೇರಿ ಹಲವರು ಇದ್ದರು.