ಶಿವಮೊಗ್ಗದಲ್ಲಿ ನಾಳೆ ನೀಟ್‌ ಪರೀಕ್ಷೆ, ಹೇಗಿದೆ ಸಿದ್ಧತೆ? ಎಷ್ಟು ಕೇಂದ್ರಗಳು? ಎಷ್ಟು ಅಭ್ಯರ್ಥಿಗಳಿದ್ದಾರೆ?

ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ಮೇ 3 ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (NEET-UG 2026) ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹೇಮಂತ್.ಎನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಎನ್.‌ಹೇಮಂತ್‌, ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು. ಇನ್ನು, ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು? ಪರೀಕ್ಷೆಯ ಹೈಲೈಟ್‌ ಏನು? ಇಲ್ಲಿದೆ ಡಿಟೇಲ್ಸ್‌

ಪರೀಕ್ಷೆಯ ವಿವರ

  • ಮೇ 3ರಂದು ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ.
  • ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
  • ಜಿಲ್ಲೆಯಲ್ಲಿ ಒಟ್ಟು 4577 ವಿದ್ಯಾರ್ಥಿಗಳು ಈ ಬಾರಿ ನೀಟ್ ಪರೀಕ್ಷೆ ಬರೆಯಲಿದ್ದಾರೆ.

ಬಿಗಿ ಭದ್ರತೆ, ನಿಷೇಧಾಜ್ಞೆ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪ್ರತಿ ಕೇಂದ್ರಕ್ಕೂ ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಿಸಲಾಗಿದೆ.

IAS-Officer-N-Hemant-Holds-meeting-about-NEET-Exam.

ಇನ್ನು, ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೇವಲ ನಿಯೋಜಿತ ಸಿಬ್ಬಂದಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಎನ್‌.ಹೇಮಂತ್‌ ತಿಳಿಸಿದರು.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ

  • ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ಒಂದು ವೇಳೆ ಅಭ್ಯರ್ಥಿಗಳು ನಿಷೇಧಿತ ವಸ್ತುಗಳನ್ನು ತಂದಿದ್ದಲ್ಲಿ, ಅವರ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು.
  • ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಆಸನ ವ್ಯವಸ್ಥೆ ಮತ್ತು ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಕೋಟಿ ಕೋಟಿಯ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಬಡಾವಣೆಗೆ ಬಂಗಾರಪ್ಪ ಹೆಸರು

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 2, 2026 at 7:23 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 2, 2026

Leave a Comment