ಸಾಗರದಲ್ಲಿ ಅಣು ಸ್ಥಾವರ ಆತಂಕ, ಜಿಲ್ಲಾಧಿಕಾರಿಯಿಂದ ಮಹತ್ವದ ಸ್ಪಷ್ಟನೆ, ಏನದು?

ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು (Besur) ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ (nuclear power plant) ಸ್ಥಾಪನೆಯಾಗಲಿದೆ ಎಂಬ ವದಂತಿಗಳನ್ನು ಜಿಲ್ಲಾಧಿಕಾರಿ ಹೇಮಂತ್.ಎನ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಈ ಕುರಿತು ವಾರ್ತಾ ಇಲಾಖೆ ಮೂಲಕ ಪ್ರಕಟಣೆ ನೀಡಿರುವ ಹೇಮಂತ್‌.ಎನ್‌ ಅವರು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಎನ್‌ಟಿಪಿಸಿ ಸಂಸ್ಥೆಯು ಬೇಸೂರಿನಲ್ಲಿ ಜಮೀನು ಗುರುತಿಸಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

Shimoga-DC-N-Hemanth-IAS-about-Besuru-nuclear-power-plant.

ಡಿಸಿ ಏನೆಲ್ಲ ಹೇಳಿದ್ದಾರೆ? ಇಲ್ಲಿದೆ ಪಾಯಿಂಟ್ಸ್

  • ಬೇಸೂರಿನಲ್ಲಿ ಪರಮಾಣು ಸ್ಥಾವರ ಸ್ಥಾಪನೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ.
  • ಜಮೀನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂಬುದು ಕೇವಲ ವದಂತಿ.
  • ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಮನವಿ.
  • ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ ಎಂದು ಡಿಸಿ ಭರವಸೆ.

“ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಷ್ಟೆ.” ‌

– ಹೇಮಂತ್ ಎನ್., ಜಿಲ್ಲಾಧಿಕಾರಿ.

ಸ್ಥಳೀಯ ಪರಿಸರ ಮತ್ತು ಜನರ ಹಿತದೃಷ್ಟಿಯಿಂದ ಇಂತಹ ಯಾವುದೇ ಯೋಜನೆಗಳ ಚರ್ಚೆ ಜಿಲ್ಲಾಡಳಿತದ ಮಟ್ಟದಲ್ಲಿ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕುವೆಂಪು ವಿವಿ: ಮೂವರಿಗೆ ಗೌರವ ಡಾಕ್ಟರ್‌, ರಾಜ್ಯಪಾಲರ ಅನುಮೋದನೆ, ಹೆಸರು ಘೋಷಣೆ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 5, 2026 at 11:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 5, 2026