ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ (Kuvempu University) 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲು ರಾಜ್ಯಪಾಲ (Governor) ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಬುಧವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಎಷ್ಟೊತ್ತಿಗೆ ಬರ್ತಾರೆ?
ರಾಜ್ಯಪಾಲರು ಮತ್ತು ಉನ್ನತ ಶಿಕ್ಷಣ ಸಚಿವರು ಬೆಳಗ್ಗೆ 9:25ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 10:15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಹೊರಟು 10:45ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣಕ್ಕೆ ಆಗಮಿಸಲಿದ್ದಾರೆ.
ಕುವೆಂಪು ವಿವಿಯಲ್ಲಿ ಏನೇನು ಕಾರ್ಯಕ್ರಮ?
- ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ: ವಿಶ್ವವಿದ್ಯಾಲಯದ ಬಸವ ಸಭಾಭವನದಲ್ಲಿ ಆಯೋಜಿಸಿರುವ 35ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿ.
- ಮಧ್ಯಾಹ್ನ 1:05: ವಿಶ್ವವಿದ್ಯಾಲಯದ ಅತಿಥಿಗೃಹಕ್ಕೆ ಭೇಟಿ ಮತ್ತು ವಿಶ್ರಾಂತಿ.
- ಮಧ್ಯಾಹ್ನ 2:15: ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್.

ಕುವೆಂಪು ವಿವಿಯಲ್ಲಿ ಬಿಗಿ ಭದ್ರತೆ
ಘಟಿಕೋತ್ಸವ ಮತ್ತು ರಾಜ್ಯಪಾಲರ ಭೇಟಿ ಹಿನ್ನೆಲೆ ಶಂಕರಘಟ್ಟದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿದೆ. ಜಿಲ್ಲಾ ರಕ್ಷಣಧಿಕಾರಿ ಬಿ.ನಿಖಲ್ ಅವರು ಇಂದು ಕುವೆಂಪು ವಿವಿ ಆವರಣಕ್ಕೆ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದರು. ಶ್ವಾನದಳ, ಬಾಂಬ್ ಪತ್ತೆ ದಳ ಕೂಡ ಕುವೆಂಪು ವಿವಿ ಆವರಣದಲ್ಲಿ ಶೋಧ ಕಾರ್ಯ ನಡೆಸಿತು.
ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಆಹೋರಾತ್ರಿ ಧರಣಿ, ಕಾರಣವೇನು?
Governor Thaawarchand Gehlot attend the 35th annual convocation of Kuvempu University. Get the complete schedule and security details for the event at Shankaraghatta.







