ನ್ಯಾಯಾಲಯದ ಸಿಬ್ಬಂದಿಗೆ ಫೋನಿನಲ್ಲಿ ‘ಮಂಗಳಮ್ಮ’ ಎಂದು ಪರಿಚಯಿಸಿಕೊಂಡು ಬೆದರಿಕೆ, ಏನಿದು ಕೇಸ್‌?

ತೀರ್ಥಹಳ್ಳಿ: ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಿಗೆ (court staff) ವ್ಯಕ್ತಿಯೊಬ್ಬ ಕರೆ ಮಾಡಿ ಹಣ ವಾಪಸ್‌ ಕೊಡದಿದ್ದರೆ ಹಲ್ಲೆ ಮಾಡಲಾಗುತ್ತದೆ ಎಂದು ಬೆದರಿಕೆ (Threat) ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

ನ್ಯಾಯಾಲಯದ ಸಿಬ್ಬಂದಿಯೊಬ್ಬರಿಗೆ ಕರ್ತವ್ಯದಲ್ಲಿದ್ದಾಗ ಅಪರಿಚಿತ ನಂಬರ್‌ನಿಂದ ಕರೆ ಬಂದಿತ್ತು. ರಿಸೀವ್‌ ಮಾಡಿದಾಗ, ಕರೆ ಮಾಡಿದ ವ್ಯಕ್ತಿಯು ತನ್ನ ಹೆಸರನ್ನು ‘ಮಂಗಳಮ್ಮ’ ಎಂದು ಹೇಳಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

Thirthahalli Police Station

Thirthahalli Police Station

“ನೀವು ಯಾರಿಂದಲೋ ₹12 ಲಕ್ಷ ಹಣ ಪಡೆದಿದ್ದೀರಿ. ಆ ಹಣವನ್ನು ಕೂಡಲೇ ವಾಪಸ್ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಹಲ್ಲೆ ನಡೆಸಲಾಗುವುದು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ. ಈ ಹಿನ್ನೆಲೆ ಸಿಬ್ಬಂದಿಯು ಪೊಲೀಸರಿಗೆ ದೂರು ನೀಡಿದ್ದಾರೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ದೇವಸ್ಥಾನದಲ್ಲಿ ಕಾಣಿಕೆ ಹಣ ಕಳ್ಳತನ, ಹೇಗಾಯ್ತು ಘಟನೆ?