ಹೊಳಲೂರಿನಲ್ಲಿ ನಿರುದ್ಯೋಗಿಗಳಿಗೆ ಉಚಿತ ತರಬೇತಿ, ಏನೆಲ್ಲ ಕಲಿಸಲಾಗುತ್ತದೆ? ಯಾರಿಗೆಲ್ಲ ಅವಕಾಶವಿದೆ?

ಹೊಳಲೂರು: ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ((training)) ಸಂಸ್ಥೆಯು (RSETI) ವಿವಿಧ ವೃತ್ತಿಪರ ತರಬೇತಿಗಳನ್ನು ಹಮ್ಮಿಕೊಂಡಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತರಬೇತಿಗಳ ವಿವರ

  • ತರಬೇತಿ 1: ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್: 35 ದಿನಗಳ ಅವಧಿಯ ಈ ತರಬೇತಿಯು 2026ರ ಮೇ 11 ರಿಂದ ಪ್ರಾರಂಭವಾಗಲಿದೆ.
  • ತರಬೇತಿ 2: ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ: 12 ದಿನಗಳ ಕಾಲ ನಡೆಯುವ ಈ ತರಬೇತಿಯು ಮೇ 14ರಿಂದ ಆರಂಭವಾಗಲಿದೆ.
  • ತರಬೇತಿ 3: ಅಣಬೆ ಬೇಸಾಯ: 10 ದಿನಗಳ ಅವಧಿಯ ಈ ತರಬೇತಿಯು ಮೇ 20ರಿಂದ ಪ್ರಾರಂಭವಾಗಲಿದೆ.

ಅರ್ಹತೆ ಮತ್ತು ಸೌಲಭ್ಯಗಳು

ಅಭ್ಯರ್ಥಿಗಳು 18 ರಿಂದ 49 ವರ್ಷ ವಯೋಮಿತಿಯೊಳಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವವರಿಗೆ ಹಾಗೂ ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಮಾಡುವ ಆಸಕ್ತಿ ಉಳ್ಳವರಿಗೆ ಆದ್ಯತೆ ನೀಡಲಾಗುವುದು.

Just-Mahithi-Update-Shimoga-News

ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಸಂಸ್ಥೆಯಲ್ಲೇ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 ಇಲ್ಲಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08182-245721, ಮೊಬೈಲ್: 9481955721, 9743429595, 9164411580, 9632961707, 8722384541, 9449371579, ಇಮೇಲ್: cbrsetiholalur@gmail.com ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಆಹೋರಾತ್ರಿ ಧರಣಿ, ಕಾರಣವೇನು?