ಶಿವಮೊಗ್ಗದಲ್ಲಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ, ಆದೇಶ ಹಿಂಪಡೆಯುವಂತೆ ಆಗ್ರಹ

ಶಿವಮೊಗ್ಗ: ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (veterinary and fisheries university) ಉಪನ್ಯಾಸಕರಿಗೆ (professors) ನೀಡಲಾಗುತ್ತಿದ್ದ ಎನ್‌ಪಿಎ (ನಾನ್ ಪ್ರಾಕ್ಟಿಸಿಂಗ್ ಭತ್ಯೆ) ನಿಲ್ಲಿಸಿರುವ ಸರ್ಕಾರದ ನಡೆ ಖಂಡಿಸಿ, ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಮುಷ್ಕರದ ಸ್ಥಳಕ್ಕೆ ತೆರಳಿದ ಶಾಸಕ ಎಸ್‌.ಎನ್. ಚನ್ನಬಸಪ್ಪ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು. ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಿಗಳು ಎದುರಿಸುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

060526 Lecturers protest for NPA in Shimoga

veterinary and fisheries university professors protesting

ಉಪನ್ಯಾಸಕರ ಭತ್ಯೆಗಳನ್ನು ಕಡಿತಗೊಳಿಸುವುದು ಅವರ ವೃತ್ತಿನಿಷ್ಠೆಗೆ ಮಾಡುವ ಅವಮಾನ. ಸ್ಥಗಿತಗೊಂಡಿರುವ ಎನ್‌ಪಿಎಯನ್ನು ಕೂಡಲೇ ಬಿಡುಗಡೆ ಮಾಡಲು ಮತ್ತು ಉಪನ್ಯಾಸಕರ ಹಿತರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ : ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ, ಕುವೆಂಪು ವಿವಿಯಲ್ಲಿ ಹೈ ಸೆಕ್ಯೂರಿಟಿ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion