ಸಿಗಂದೂರಿನಲ್ಲಿ ಅಗ್ನಿವೀರ್‌, ಪ್ಯಾರಾ ಮಿಲಿಟರಿ, ಪೊಲೀಸ್‌ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ

ಶಿವಮೊಗ್ಗ: ಅಗ್ನಿವೀರ್, ಪ್ಯಾರಾ ಮಿಲಿಟರಿ ಮತ್ತು ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗಾಗಿ (recruitment coaching) ಶ್ರೀ ಸಿಗಂದೂರು ಚೌಡೇಶ್ವರಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಆನಂದಪುರದ ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ವತಿಯಿಂದ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದ ವಿವರಗಳು

ಮೇ 13 ರಿಂದ ಮೇ 28 ರವರೆಗೆ ತರಬೇತಿ ನಡೆಯಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್‌ನ ಮಾಜಿ ಮತು ಹಾಲಿ ಯೋಧರು ತರಬೇತಿ ನೀಡಲಿದ್ದಾರೆ. ದೈಹಿಕ ಮತ್ತು ಲಿಖಿತ ಪರೀಕ್ಷೆಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಏನೇನು ಅರ್ಹತೆಗಳು?

  • ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು.
  • 25 ವರ್ಷ ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.
Indian-Army-Training-at-Anandapuram - recruitment coaching

ನೋಂದಣಿ ಮತ್ತು ಪ್ರವೇಶ ಹೇಗೆ?

ತರಬೇತಿಗೆ ಹಾಜರಾಗುವವರು ಮೇ 13 ರಂದು ಬೆಳಗ್ಗೆ 8 ಗಂಟೆಗೆ ಕನಿಷ್ಠ ಒಬ್ಬರು ಪೋಷಕರೊಂದಿಗೆ ದೇವಸ್ಥಾನದ ಆವರಣದಲ್ಲಿ ಹಾಜರಿರಬೇಕು. ನಂತರ ಬರುವವರಿಗೆ ಅವಕಾಶವಿರುವುದಿಲ್ಲ. ದೂರವಾಣಿ ಮೂಲಕ ಮುಂಚಿತವಾಗಿ ಹೆಸರು ನೋಂದಾಯಿಸಿಕೊಂಡವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.

160321 Army Training at Nehru Stadium 1

ನೋಂದಣಿ ಮತ್ತು ಮಾಹಿತಿಗೆ

ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಮೊಬೈಲ್‌ ಸಂಖ್ಯೆ: 7019776749, 7406212345, 9448954052, 9740980992 ಸಂಪರ್ಕಿಸಬಹುದು. ವೆಬ್‌ಸೈಟ್: https://malnadsoldiercoching.rf.gd ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಹಾಗೂ ಯೂಟ್ಯೂಬ್‌ನಲ್ಲಿ ‘ಮಲ್ನಾಡ್ ಸೋಲ್ಡರ್ ಕೋಚಿಂಗ್ ಸೆಂಟರ್’ ಎಂದು ಹುಡುಕುವ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.

ಇದನ್ನೂ ಓದಿ : ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ, ಕುವೆಂಪು ವಿವಿಯಲ್ಲಿ ಹೈ ಸೆಕ್ಯೂರಿಟಿ

ರಾಜ್ಯದ ಎಲ್ಲಾ ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 6, 2026 at 10:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 6, 2026