ರೈಲ್ವೆ ಸುದ್ದಿ: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಹಿರೇಹಳ್ಳಿ ಯಾರ್ಡ್‌ನಲ್ಲಿ ಅತ್ಯಗತ್ಯ ಸುರಕ್ಷತಾ ಮತ್ತು ಸಿಗ್ನಲಿಂಗ್ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಮೇ 20ರಂದು ವಿವಿಧ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವ್ಯಾವ ರೈಲುಗಳ ಸಂಚಾರದಲ್ಲಿ ಬದಲಾವಣೆ?
ರೈಲುಗಳ ಮಾರ್ಗ ಬದಲಾವಣೆ
ರೈಲು 1: ರೈಲು ಸಂಖ್ಯೆ 20689 ಯಶವಂತಪುರ–ಶಿವಮೊಗ್ಗ ಟೌನ್ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು. ಮೇ 20 ರಂದು ಹೊರಡುವ ರೈಲು ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ರೈಲು 2: ರೈಲು ಸಂಖ್ಯೆ 20676 ಮೈಸೂರು–ಬೆಳಗಾವಿ ವಿಶ್ವಮಾನವ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು. ಮೇ 20ರಂದು ಹೊರಡುವ ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ಪಾಂಡವಪುರದಿಂದ ತಿಪಟೂರಿನವರೆಗಿನ ಎಲ್ಲಾ ನಿಲ್ದಾಣಗಳ ನಿಲುಗಡೆಯನ್ನು ಇರುವುದಿಲ್ಲ.
ರೈಲುಗಳ ಭಾಗಶಃ ರದ್ದು
ರೈಲು 1: ರೈಲು ಸಂಖ್ಯೆ 66567 ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು ರೈಲು ಮೇ 20ರಂದು ದೊಡ್ಡಬೆಲೆ ಮತ್ತು ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ದೊಡ್ಡಬೆಲೆಯಲ್ಲಿ ಕೊನೆಗೊಳ್ಳಲಿದೆ.
ರೈಲು 2: ರೈಲು ಸಂಖ್ಯೆ 66572 ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು ರೈಲು ಮೇ 20ರಂದು ತುಮಕೂರು ಮತ್ತು ದೊಡ್ಡಬೆಲೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ತುಮಕೂರಿನ ಬದಲಾಗಿ ದೊಡ್ಡಬೆಲೆ ನಿಲ್ದಾಣದಿಂದ ನಿಗದಿತ ಸಮಯಕ್ಕೆ ತನ್ನ ಪ್ರಯಾಣ ಆರಂಭಿಸಲಿದೆ.

ರೈಲುಗಳ ನಿಯಂತ್ರಣ
ರೈಲು 1: ವೇಲಂಕಣಿಯಿಂದ ಹೊರಡುವ ರೈಲು ಸಂಖ್ಯೆ 17316 ಮೇ 19ರಂದು ವೇಲಂಕಣಿ–ವಾಸ್ಕೊ ಡ ಗಾಮ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣಕ್ಕೊಳಪಡಲಿದೆ (ವಿಳಂಬವಾಗಲಿದೆ).
ರೈಲು 2: ಮೇ 20ರಂದು ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳ ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ದಗಂಗಾ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಾಗೂ 12649 ಯಶವಂತಪುರ–ಹಜರತ್ ನಿಜಾಮುದ್ದೀನ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳು ಮಾರ್ಗಮಧ್ಯೆ ತಲಾ 30 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿವೆ.


