ಶಿವಮೊಗ್ಗ ಸಿಟಿಯಲ್ಲಿ ಮಳೆ, ರಾತ್ರಿಗೆ ಮತ್ತೆ ಅಲರ್ಟ್‌ ಪ್ರಕಟ

ಶಿವಮೊಗ್ಗ: ನಗರದಲ್ಲಿ ಸಂಜೆ ವೇಳೆಗೆ ಮಳೆಯಾಯಿತು. ಗಾಳಿ, ಗುಡುಗು ಸಹಿತ ಕೆಲವು ಹೊತ್ತು ಮಳೆ ಸುರಿಯಿತು. ಇದರಿಂದಾಗಿ ನಗರದಲ್ಲಿ ತಾಪಮಾನ ಸ್ವಲ್ಪ ತಗ್ಗಿದೆ.

ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿತು. ಮೊದಲಿಗೆ ವಿವಿಧ ಬಡಾವಣೆಗಳಲ್ಲಿ ಸಾಧಾರಣ ಮಳೆಯಾಯಿತು. ಸ್ವಲ್ಪ ಹೊತ್ತಿನ ಬಳಿಕ ನಗರದಾದ್ಯಂತ ಜೋರು ಮಳೆಯಾಯಿತು. ಅರ್ಧ ಗಂಟೆಗು ಹೆಚ್ಚು ಹೊತ್ತು ಮಳೆ ಸುರಿಯಿತು.

Rainfall-in-Shimoga-city.

ಗಾಳಿ, ಮಳೆಯಿಂದಾಗಿ ಶಿವಮೊಗ್ಗ ನಗರದಲ್ಲಿ ತಾಪಮಾನ ತುಸು ತಗ್ಗಿದೆ. ವಾತಾವರಣ ತಂಪಾಗಿದೆ. ಆದರೆ ಕಟ್ಟಡಗಳ ಒಳಗಿನ ಧಗೆ ಮುಂದುವರೆದಿದೆ. ಶಿವಮೊಗ್ಗದಲ್ಲಿ ಸದ್ಯ 27° ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಸದ್ಯ ಮೋಡ ಕವಿದ ವಾತಾವರಣ ಮುಂದುವರೆದಿದೆ. ಇನ್ನೊಂದೆಡೆ ರಾತ್ರಿ ಗಾಳಿ ಸಹಿತ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂಬ ಅಲರ್ಟ್‌ ನೀಡಲಾಗಿದೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 7, 2026 at 8:32 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 7, 2026