ಶಿವಮೊಗ್ಗ: ಯೋಜನೆ ಮತ್ತು ಸಾಂಖಿಕ ಇಲಾಖೆ (Planning and Statistics Department) ಸಚಿವ ಡಿ. ಸುಧಾಕರ್ ನಿಧನದ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ (State mourning) ಘೋಷಿಸಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರಧ್ವಜವನ್ನು (National Flag) ಅರ್ಧಕ್ಕೆ ಹಾರಿಸಲಾಗುತ್ತಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ (DC Office), ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲ ಪ್ರಮುಖ ಕಟ್ಟಡಗಳ ಮೇಲಿರುವ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ (Flown at half-mast). ಇನ್ನು ಶೋಕಾಚರಣೆ ಸಂದರ್ಭ ಸರ್ಕಾರ ಸಮಾರಂಭಗಳನ್ನು ನಡೆಸುವಂತಿಲ್ಲ.

ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ಶಾಸಕ (Hiriyur MLA), ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರು ಮಂಡಿ ಚಿಪ್ಪು ಶಸ್ತ್ರಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಶ್ವಾಸಕೋಶದ ಸೋಂಕಿಗೆ (Lung infection) ತುತ್ತಾಗಿದ್ದರು. ಅವರನ್ನು ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
