ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಒಟ್ಟು 14 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಮಳೆಯಾಗಲಿದೆ?
ಕರಾವಳಿ ಭಾಗದ (Coastal regions) ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು (Thunderstorms). ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ (Moderate rain).

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಬಿಸಿಲಿನ ಬೇಗೆ (Heatwave conditions) ಹೆಚ್ಚಾಗಿದೆ. ರಾಜ್ಯದ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇವತ್ತು ಮತ್ತಷ್ಟು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರಿಂದ ರಾಜ್ಯದಲ್ಲಿ ಉಷ್ಣಾಂಶ (Atmospheric temperature) ಮತ್ತಷ್ಟು ತಗ್ಗುವ ಸಾಧ್ಯತೆ ಇದೆ.
