ಆನವಟ್ಟಿ: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಬೈಕ್ ಸವಾರನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. (Road Accident) ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸಿದ್ದೇಶ ದೊಡ್ಡಕಂಬಿ (25) ಮೃತ ದುರ್ದೈವಿ.
ಸಿದ್ದೇಶ ಅವರು ಎಲ್.ಎನ್.ಟಿ ಫೈನಾನ್ಸ್ (FINANCE) ಕಂಪನಿಯಲ್ಲಿ ಗ್ರಾಹಕ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು. ಮೇ 9ರಂದು ಕೆಲಸ ಮುಗಿಸಿಕೊಂಡು ಜಡೆಯಿಂದ ಆನವಟ್ಟಿಗೆ ತಮ್ಮ ಬೈಕ್ನಲ್ಲಿ ವಾಪಸ್ ಬರುತ್ತಿದ್ದರು. ಆನವಟ್ಟಿಯಿಂದ ಜಡೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಅತಿವೇಗ (Rash and Negligent Driving) ಬಂದು ಸಿದ್ದೇಶ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿದ್ದೇಶ ಅವರ ತಲೆ ಮತ್ತು ಮುಖಕ್ಕೆ ಗಂಭೀರ ರಕ್ತಗಾಯಗಳಾಗಿದ್ದವು ಎಂದು ಆರೋಪಿಸಲಾಗಿದೆ.

ಚಿಕಿತ್ಸೆ ಫಲಕಾರಿಯಾಗದೆ ಸಾವು
ಅಪಘಾತ ನಡೆದ ತಕ್ಷಣ ಸ್ಥಳೀಯರು ಮತ್ತು ಬಸ್ ಸಿಬ್ಬಂದಿ ಗಾಯಾಳುವನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದೇಶ ಮೃತಪಟ್ಟಿದ್ದಾರೆ (Death).
ಘಟನೆ ಸಂಬಂಧ ಖಾಸಗಿ ಬಸ್ ಚಾಲಕನ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
