ಆನವಟ್ಟಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತೆರಿಗೆದಾರರಿಗೆ (Tax Payers) 2026-27ನೇ ಸಾಲಿನ ಆಸ್ತಿ ತೆರಿಗೆ (Tax) ಪಾವತಿಯಲ್ಲಿ ಶೇ.5 ರಷ್ಟು ರಿಯಾಯಿತಿ ಪಡೆಯುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಖ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ನಿಗದಿತ ಅವಧಿಯೊಳಗೆ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವವರಿಗೆ ಒಟ್ಟು ಮೊತ್ತದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಈ ಮೊದಲು ನಿಗದಿಪಡಿಸಿದ್ದ ಅವಧಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಈಗ ಮೇ 31ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

