ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಯಾರೆಲ್ಲ ಭಾಗವಹಿಸಬಹುದು?
ಪಿಯುಸಿ, ಬಿಎ, ಬಿ.ಕಾಂ, ಬಿ.ಎಸ್ಸಿ ಮತ್ತು ಡಿಪ್ಲೊಮಾ ಪೂರೈಸಿದವರು ಸಂದರ್ಶನದಲ್ಲಿ ಭಾಗವಹಿಸಬಹುದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ತರಬೇಕು.

ಪ್ರವೇಶ ಉಚಿತ
ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು, ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606, 9108235132 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
