ಕರ್ನಾಟಕ ಸಂಘದ ಜೀವಮಾನ ಸಾಧನೆ ಪ್ರಶಸ್ತಿ, ನಾಳೆ ಕಾರ್ಯಕ್ರಮ, ಯಾರೆಲ್ಲ ಆಯ್ಕೆಯಾಗಿದ್ದಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಕರ್ನಾಟಕ ಸಂಘದ 2026ರ ಜೀವನ ಸಾಧನೆ ಪ್ರಶಸ್ತಿಗೆ ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ, ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ. ಮೇ 15ರಂದು ಸಂಜೆ ಸಂಘದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ‘ಡಾ. ದ.ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಮತ್ತು ಸಾಹಿತಿ, ವಿಮರ್ಶಕ ಬೆಂಗಳೂರಿನ 3. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ‘ಡಾ. ತೀ.ನಂ.ಶ್ರೀ ಸಾಹಿತ್ಯ ವಿಮರ್ಶೆ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

Shimoga-karnataka-Sangha-gets-Rajyotsava-Award.webp

ಸುಬ್ರಾಯ ಚೊಕ್ಕಾಡಿ ಕುರಿತು ಕೆ.ಪಿ. ಸುರೇಶ, ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಕುರಿತು ಉಜಿರೆಯ ಕನ್ನಡ ಪ್ರಾಧ್ಯಾಪಕ ಹಳೇಮನೆ ರಾಜಶೇಖರ ಅಭಿನಂದನಾ ಭಾಷಣ ಮಾಡಲಿದ್ದಾರೆ. ಪ್ರಶಸ್ತಿ ₹25,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಸಂಘದ ಅಧ್ಯಕ್ಷ ಪ್ರೊ.ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.