ಶಿವಮೊಗ್ಗ: ಉಪ ಮುಖ್ಯಮಂತ್ರಿ (Deputy Chief Minister) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ (Birthday celebration) ಅಂಗವಾಗಿ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರಿಗೆ ನಾಟಿ ಕೋಳಿ ಊಟ ವಿತರಿಸಲಾಯಿತು.
ಕೆಪಿಸಿಸಿ ರಾಜ್ಯ ಕಾರ್ಯದರ್ಶಿ (KPCC State Secretary) ಕೆ. ದೇವೇಂದ್ರಪ್ಪ ನೇತೃತ್ವದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಪೂಜೆ ಸಲ್ಲಿಸಿ ನಾಟಿ ಕೋಳಿ ಊಟ ವಿತರಣೆ ಮಾಡಿದರು.

ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ
ಮೆಗ್ಗಾನ್ ಆಸ್ಪತ್ರೆ (McGann Hospital) ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ಮತ್ತು ಅವರು ಮುಖ್ಯಮಂತ್ರಿಯಾಗಲು (Chief Minister post) ಇರುವ ತೊಡಕುಗಳು ನಿವಾರಣೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿ ಪೂಜೆ ನೆರವೇರಿಸಲಾಯಿತು.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಪೂಜೆ ನೆರವೇರಿಸಿದೆವು. ಪೂಜೆ ಸಂದರ್ಭ ದೇವಿಯು ಬಲಗಡೆ ಪ್ರಸಾದ ನೀಡುವ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
– ಕೆ. ದೇವೇಂದ್ರಪ್ಪ, ಕೆಪಿಸಿಸಿ ಕಾರ್ಯದರ್ಶಿ.
ಸಾರ್ವಜನಿಕರಿಗೆ ನಾಟಿ ಕೋಳಿ ಊಟ
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ರೋಗಿಗಳ ಸಂಬಂಧಿಕರು ಹಾಗೂ ಸಾರ್ವಜನಿಕರಿಗೆ ಮಾಂಸಾಹಾರಿ (Non-vegetarian) ಹಾಗೂ ಸಸ್ಯಾಹಾರಿ (Vegetarian) ಪ್ರಸಾದ ವಿನಿಯೋಗ ಮಾಡಲಾಯಿತು. ಈ ವೇಳೆ ರುಚಿಕರವಾದ ನಾಟಿ ಕೋಳಿ ಊಟ ಮತ್ತು ಮೊಸರನ್ನ ವಿತರಣೆ ಮಾಡಲಾಯಿತು.