ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆಯ ದಿನಾಂಕ ಪ್ರಕಟ, ಎಷ್ಟು ದಿನ? ನೀರು ಹರಿಸಲು ಕಾರಣವೇನು?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ: ಹಾವೇರಿ, ರಾಣೇಬೆನ್ನೂರು ಸೇರಿ ವಿವಿಧ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕಾಗಿ ಮೇ 18ರಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.

ಎಷ್ಟು ನೀರು? ಎಷ್ಟು ದಿನ ಹರಿಸಲಾಗುತ್ತದೆ?

​ಮೇ 18 ರಿಂದ ಮೇ 23 ರವರೆಗೆ ನೀರನ್ನು ಹರಿಸಲಾಗುತ್ತದೆ. ಪ್ರತಿದಿನ 2000 ಕ್ಯೂಸೆಕ್‌ (Cusecs) ನೀರನ್ನು ಜಲಾಶಯದಿಂದ ಹರಿಸಲಾಗುತ್ತದೆ. ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ದಂಡೆಯ ಗ್ರಾಮಗಳ ಬಹುಗ್ರಾಮ ನದಿ ನೀರು ಯೋಜನೆಯಡಿ (Multi-Village Water Supply Scheme) ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bhadra-Dam-in-Bhadravathi

ನದಿ ಪಾತ್ರದ ಜನರಿಗೆ ಎಚ್ಚರಿಕೆ

ನದಿ ದಂಡೆಯ ವ್ಯಾಪ್ತಿಯ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಈ ಭಾಗದಲ್ಲಿ ಜನರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್ ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ Shimoga News, Shivamogga News ಮತ್ತು BHADRAVATHI ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಮೇ 16, 2026