ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೇ 22 ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಪ್ರಮುಖ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 4 ಬೆಂಗಳೂರಿನಿಂದ ರಸ್ತೆ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ಬೆಳಗ್ಗೆ 8 ಗಂಟೆಗೆಶಿವಮೊಗ್ಗದ ಅಲ್ಲಮ ಪ್ರಭು ಮೈದಾನಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 1 ರಂದು ರಾಜ್ಯ ಮಟ್ಟದ ಕೆಪಿಎಸ್ (KPS) ಅಡಿಗಲ್ಲು ಕಾರ್ಯಕ್ರಮದ ನಡೆಯಲಿದೆ. ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಅಲ್ಲಮ ಪ್ರಭು ಮೈದಾನದಲ್ಲಿಯೇ ಉನ್ನತ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೆಡಿಪಿ (KDP) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
