ಹಾರನಹಳ್ಳಿಯಲ್ಲಿ ಬಸ್‌ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವ್ಯಕ್ತಿಯ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ.

ಹಾರನಹಳ್ಳಿ ನಿವಾಸಿ ಮೂರ್ತಿ (45) ಗಾಯಗೊಂಡವರು. ಮೂರ್ತಿ ಅವರು ಹಾರನಹಳ್ಳಿಯ ಕೆ.ಇ.ಬಿ ಕಚೇರಿ ಮುಂಭಾಗ ರಸ್ತೆ ದಾಟುತ್ತಿದ್ದಾಗ, ಶಿವಮೊಗ್ಗ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರ್ತಿ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಎಡಭುಜ ಹಾಗೂ ಪಕ್ಕೆಲುಬಿನ ಮೂಳೆ ಮುರಿದಿದೆ ಎಂದು ಆರೋಪಿಸಲಾಗಿದೆ.

ACCIDENT-NEWS-GENERAL-IMAGE.

ಮೂರ್ತಿ ಅವರನ್ನು ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp