NEWS HIGHLIGHTS
ಶಿವಮೊಗ್ಗ: ಬಕ್ರೀದ್ ಹಬ್ಬದ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಪಥ ಸಂಚಲನ ನಡೆಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಇನ್ನು, ಬಕ್ರೀದ್ ಹಬ್ಬದ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

ಬಕ್ರೀದ್ ಹಬ್ಬವನ್ನ ಶಾಂತಿಯುತವಾಗಿ ಆಚರಿಸಲು ಜಿಲ್ಲೆಯಲ್ಲಿ ಪೊಲೀಸರು ಹಲವು ಕ್ರಮ ಕೈಗೊಂಡಿದ್ದಾರೆ. ಸರ್ವ ಧರ್ಮದ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರ ಸಭೆಗಳನ್ನು ನಡೆಸಲಾಗುತ್ತಿದೆ. ವಿವಿದ ಬಡಾವಣೆಗಳಲ್ಲಿ ಪೊಲೀಸ್ ಇಲಾಖೆಯಿಂದ ಜನ ಸಂಪರ್ಕ ಸಭೆ ನಡೆಯುತ್ತಿವೆ.