ರಿಪ್ಪನ್ಪೇಟೆ: ಸಮೀಪದ ಹೊಂಬುಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಸೂರು ಗ್ರಾಮದ ಶಾಲಾ ಆವರಣದ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ.
ವ್ಯಕ್ತಿಯೊಬ್ಬರಿಗೆ ಚಿರತೆ ಕಣ್ಣಿಗೆ ಬಿದ್ದಿದೆ. ಅವರು ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈಚೆಗೆ ಗ್ರಾಮದಲ್ಲಿ ಮೇಯಲು ಬಿಟ್ಟಿದ್ದ ಜಾನುವಾರುಗಳು ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಅವುಗಳ ಮೇಲೆ ಚಿರತೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಬೇಕು. ಚಿರತೆಯ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ, ಬೋನು ಇಟ್ಟು ಅದನ್ನು ತಕ್ಷಣವೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಕಡಸೂರು ನಿವಾಸಿಗಳು ಒತ್ತಾಯಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
