NEWS HIGHLIGHTS
ಭದ್ರಾವತಿ: ನಗರದ ಬೈಪಾಸ್ ರಸ್ತೆ ಕ್ರಾಸ್ ಸಮೀಪದ ತಗಡಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಹಣದ ಆಮಿಷವೊಡ್ಡಿ ಯುವತಿಯರನ್ನು ಅಲ್ಲಿಗೆ ಕರೆಯಿಸಲಾಗುತಿತ್ತು. ಮಾಹಿತಿ ತಿಳಿದ ಭದ್ರಾವತಿ ನ್ಯೂಟೌನ್ ಠಾಣೆಯ ಪಿಎಸ್‌ಐ ಮತ್ತು ಮಹಿಳಾ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮನೆಯಲ್ಲಿ ಹಣದ ಆಮಿಷ ಒಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
