NEWS HIGHLIGHTS
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ದಿಢೀರ್ ಬೆಂಗಳೂರಿಗೆ ತೆರಳಿದ್ದಾರೆ. ಇವತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗಬೇಕಿತ್ತು.
ಸಚಿವ ಮಧು ಬಂಗಾರಪ್ಪ ಇಂದು ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಶುಭಂ ಹೊಟೇಲ್‌ನಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿದರು. ಸಭೆಯ ನಂತರ ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸಭೆ ನಿಗದಿಯಾಗಿತ್ತು. ತೀರ್ಥಹಳ್ಳಿಯಲ್ಲಿಯು ಕಾರ್ಯಕರ್ತರ ಸಭೆ ನಿಗದಿಯಾಗಿತ್ತು.

ಇವೆರಡು ಸಭೆಗಳನ್ನು ರದ್ದುಗೊಳಿಸಿ ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳಿದ್ದಾರೆ. ರಾಜ್ಯ ರಾಜಕಾರಣದಲ್ಲಿನ ಬೆಳವಣಿಗೆ ಬೆನ್ನಿಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಬೆಂಗಳೂರಿಗೆ ಮರಳಿದ್ದಾರೆ. ನಾಳೆ ಬೆಳಗ್ಗೆ ಮುಖ್ಯಮಂತ್ರಿ ಅವರು ಕರೆದಿರುವ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ.