ಸಿದ್ದರಾಮಯ್ಯ ರಾಜೀನಾಮೆ ವಿಚಾರ, ಶಿವಮೊಗ್ಗದಲ್ಲಿ ವಿಜಯೇಂದ್ರ ಮೊದಲ ಪ್ರತಿಕ್ರಿಯೆ, ಏನಂದ್ರು?

ಶಿವಮೊಗ್ಗ: ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ಯಾವುದೇ ಹೊಸ ಮುಖ್ಯಮಂತ್ರಿ ಬಂದರೂ ಅದು ತಾತ್ಕಾಲಿಕ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.  

ವಿನೋಬನಗರದ ತಮ್ಮ ಮನೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅವಧಿಪೂರ್ವ ಚುನಾವಣೆ ನಡೆಯಲಿದೆ. ಅದಕ್ಕಾಗಿ ರಾಜ್ಯದ ಜನತೆಗೆ ಏನು ಕೊಡಬೇಕು ಹಾಗೂ ಸಂಘಟನೆಯ ಮೂಲಕ ರಾಜ್ಯದಲ್ಲಿ ಹೇಗೆ ಅಧಿಕಾರಕ್ಕೆ ಬರಬೇಕು ಎನ್ನುವ ಬಗ್ಗೆ ಯೋಚಿಸುತ್ತೇವೆ ಎಂದು ತಿಳಿಸಿದರು.

BY-Vijayendra-Speaks-about-CM-Change

ಕಾಂಗ್ರೆಸ್‌ನ ಅವನತಿ ಶುರುವಾಗಿದೆ

‘ದೆಹಲಿಯಲ್ಲಿ ಐದು ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆದಿದೆ. ಈ ಸಭೆಯ ಬಳಿಕ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಬೇಕು ಎನ್ನುವ ನಿರ್ಧಾರವನ್ನು ಹೈಕಮಾಂಡ್ ಕೈಗೊಂಡಿದೆ. ದೇಶದಲ್ಲಿ ಈಗಾಗಲೇ ಕಾಂಗ್ರೆಸ್ ಅವನತಿ ಶುರುವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದ ಬಳಿಕ ಕಾಂಗ್ರೆಸ್ ಇಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ’ ಎಂದು ವಿಜಯೇಂದ್ರ ಹೇಳಿದರು.

ಹತ್ತು ಸಾವಿರ ಕೋಟಿ ಸಾಲ

‘ಸಿದ್ದರಾಮಯ್ಯ ಅವರ ಬದಲಿಗೆ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಸಿದ್ದರಾಮಯ್ಯ ಅವರು ಅತಿ ಹೆಚ್ಚು ಅನುಭವವಿರುವ ಮುಖ್ಯಮಂತ್ರಿ ಆಗಿದ್ದರೂ, ಅವರ ಅವಧಿಯಲ್ಲಿ ಹತ್ತು ಸಾವಿರ ಕೋಟಿ ರೂಪಾಯಿ ಸಾಲವಾಗಿದೆ. ಕಾಂಗ್ರೆಸ್‌ನ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ. ವಾಲ್ಮೀಕಿ ನಿಗಮ, ಮೂಡಾ ಹಗರಣ ಸೇರಿದಂತೆ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಏಕೈಕ ರಾಜ್ಯ ಕರ್ನಾಟಕ’ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp