ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಸಿದ್ದರಾಮಯ್ಯ ಪರ ಹೋರಾಟ

ಶಿವಮೊಗ್ಗ: ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು ಎಂದು ಆಗ್ರಹಿಸಿ ಕುರುಬ ಸಮುದಾಯದ ವತಿಯಿಂದ ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶಿವಪ್ಪನಾಯಕ ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಿತು.

‘ಸಿದ್ದರಾಮಯ್ಯ ಅವರು ಅಹಿಂದ ವರ್ಗವನ್ನು ಒಗ್ಗೂಡಿಸಿದ್ದರು. ಅವರ ನಾಯಕತ್ವದ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದೆ. ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆಯಬೇಕು ಎಂದು ಸೂಚಿಸಲಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಸಿದ್ದರಾಮಯ್ಯ ಅವರನ್ನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಮುಂದುವರೆಸಬೇಕುʼ ಎಂದು ಆಗ್ರಹಿಸಿದರು.

Protest-in-favour-of-Siddaramaiah-in-shimoga-city

ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ವೇಳೆ ಕುರುಬ ಸಮುದಾಯದ ಮುಖಂಡರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿರುವುದಕ್ಕೆ ಹಿಂದುಳಿದ ವರ್ಗಗಳ ವಿರೋಧವಿದೆ. ಅಹಿಂದ ವರ್ಗ ಸಿದ್ದರಾಮಯ್ಯ ಅವರ ಕಾರಣಕ್ಕೆ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದರು. ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದರು. ಆದ್ದರಿಂದ ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ಐದು ವರ್ಷ ಸಿಎಂ ಸ್ಥಾನದಲ್ಲಿ ಮುಂದುವರೆಸಬೇಕು.

– ಕೆ.ಆರ್‌.ಸುರೇಶ್‌, ಕನಕ ಯುವ ಸೇನೆ ಅಧ್ಯಕ್ಷ

ಕನಕ ಯುವ ಸೇನೆ, ಕುರುಬರ ಯುವ ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp