NEWS HIGHLIGHTS
ಶಿವಮೊಗ್ಗ: ತ್ಯಾಗದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಶಿವಮೊಗ್ಗದಲ್ಲಿ ಆಚರಿಸಲಾಯಿತು. ಜಿಲ್ಲೆಯ ವಿವಿಧೆಡೆ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದಲ್ಲಿ ಇಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಇನ್ನು, ಸಾಮೂಹಿಕ ಪ್ರಾರ್ಥನೆ ಹಿನ್ನೆಲೆ ಮೈದಾನಕ್ಕೆ ಹೊಂದಿಕೊಂಡ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಅಲ್ಲದೆ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
