ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಇಂದಿನ ರಿಪೋರ್ಟ್‌

ಶಿವಮೊಗ್ಗ: ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿಯಲ್ಲಿ ಇಂದಿನ ನೀರಿನ ಮಟ್ಟದ ವಿವರಣೆ ಇಲ್ಲಿದೆ.

ತುಂಗಾ ಜಲಾಶಯ

ಒಟ್ಟು ಸಂಗ್ರಹ ಸಾಮರ್ಥ್ಯ 3.24 ಟಿಎಂಸಿ, ಸದ್ಯ 2.411 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಆಗಿದೆ. ಇಂದು ಜಲಾಶಯದ ನೀರಿನ ಮಟ್ಟವು 586.78 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂಗೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 90 ಕ್ಯೂಸೆಕ್ ಆಗಿದ್ದು, ಜಲಾಶಯದಿಂದ ಅಷ್ಟೇ ಪ್ರಮಾಣದ ಅಂದರೆ 90 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

Bhadra-Dam-in-Bhadravathi

ಭದ್ರಾ ಜಲಾಶಯ

ಗರಿಷ್ಠ ಮಟ್ಟ 186 ಅಡಿ. ಇಂದಿನ ನೀರಿನ ಮಟ್ಟ 137 ಅಡಿ. 71.535 ಟಿಎಂಸಿ ಒಟ್ಟು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಪ್ರಸ್ತುತ 25.079 ಟಿಎಂಸಿ ನೀರು ಸಂಗ್ರಹವಿದೆ. ಸದ್ಯ ಜಲಾಶಯಕ್ಕೆ 187 ಕ್ಯೂಸೆಕ್ ಒಳಹರಿವು ಇದ್ದು, ವಿವಿಧ ನಾಲೆಗಳು ಹಾಗೂ ನದಿಗೆ ಒಟ್ಟು 499 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯ

ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಇಂದು ನೀರಿನ ಮಟ್ಟ 1753.65 ಅಡಿ ದಾಖಲಾಗಿದೆ. ಸದ್ಯ ಜಲಾಶಯಕ್ಕೆ ಯಾವುದೇ ಒಳಹರಿವು ಇಲ್ಲ. ಪ್ರಸ್ತುತ 5,579 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp