ತೀರ್ಥಹಳ್ಳಿ: ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರಿಂದ ದಾಳಿ, ಕೇಸ್‌ ದಾಖಲು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

Thirthahalli News: ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು ₹65,333 ಮೌಲ್ಯದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಕೃತ್ಯಕ್ಕೆ ಬಳಸಲಾದ ಓಮಿನಿ ಕಾರು ಮತ್ತು ತೂಕದ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಲಿಂಗಾಪುರ ಗ್ರಾಮದ ಆಚಿಪೇಟೆ 2ನೇ ಕ್ರಾಸ್‌ನಲ್ಲಿರುವ ಮನೆಯೊಂದರ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಆಹಾರ ಇಲಾಖೆಯ ಅಧಿಕಾರಿಗಳು, ಮಾಳೂರು ಠಾಣೆಯ ಪೊಲೀಸರು ದಾಳಿ ನಡೆಸಿದರು.

Maluru-Police-Station-in-Thirthahalli-taluk.webp

ದಾಳಿ ವೇಳೆ ಪರವಾನಗಿ ಇಲ್ಲದೆ ದಾಸ್ತಾನು ಮಾಡಲಾಗಿದ್ದ ಒಟ್ಟು 1,888.25 ಕೆ.ಜಿ ತೂಕದ ಪಡಿತರ ಅಕ್ಕಿ ಪತ್ತೆಯಾಗಿದೆ. ಅಧಿಕಾರಿಗಳು ಅಕ್ಕಿ ಮೂಟೆಗಳೊಂದಿಗೆ ಸ್ಥಳದಲ್ಲಿದ್ದ ಡಿಜಿಟಲ್ ತೂಕದ ಸ್ಕೇಲ್ ಹಾಗೂ ಓಮಿನಿ ಕಾರನ್ನು ನಡೆಸಿ ವಶಕ್ಕೆ ಪಡೆಯಲಾಗಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.