ಸಾಗರದಲ್ಲಿ ಮೆಸ್ಕಾಂ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ಸಾಗರ: ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಚೇರಿಯಲ್ಲಿ ಜೂನ್ 3ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಭೆಯಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಂಬಂಧಪಟ್ಟ ಗ್ರಾಮೀಣ ಪ್ರದೇಶದ ವಿದ್ಯುತ್ ಗ್ರಾಹಕರು ತಮ್ಮ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸಭೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ದೂರವಾಣಿ ಸಂಖ್ಯೆ 9480880595 ಅನ್ನು ಸಂಪರ್ಕಿಸಬಹುದಾಗಿದೆ.

SAGARA-NEWS-GRAPHICS-BY-SHIVAMOGGA-LIVE

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp