SHIVAMOGGA: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಮತೋಲನ ಕಳೆದುಕೊಂಡು ಬೀಳುತ್ತಿದ್ದ ಪ್ರಯಾಣಿಕರೊಬ್ಬರನ್ನು ಆರ್‌ಪಿಎಫ್ ಇನ್‌ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ನಿಲ್ದಾಣದ ಪ್ಲಾಟ್‌ಫಾರ್ಮ್ ನಂ.1 ರಲ್ಲಿ ಭಾನುವಾರ ಸಂಜೆ ರೈಲು ಹೊರಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಇದರ ವಿಡಿಯೋ ಕೆಳಗಿದೆ.
ಹೇಗಾಯ್ತು ಘಟನೆ?
ರೈಲು ಚಲಿಸಲು ಆರಂಭವಾದ ನಂತರ ಪ್ರಯಾಣಿಕರೊಬ್ಬರು ಅದನ್ನು ಹತ್ತಲು ಪ್ರಯತ್ನಿಸಿದಾಗ ಸಮತೋಲನ ಕಳೆದುಕೊಂಡು ಪ್ಲಾಟ್‌ಫಾರ್ಮ್ ಮತ್ತು ಚಲಿಸುತ್ತಿದ್ದ ರೈಲಿನ ನಡುವಿನ ಅಂತರಕ್ಕೆ ಬೀಳುವ ಅಪಾಯದಲ್ಲಿದ್ದರು. ಈ ವೇಳೆ ಪ್ಲಾಟ್‌ಫಾರ್ಮ್‌ನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಶಿವಮೊಗ್ಗ ಆರ್‌ಪಿಎಫ್ ಇನ್‌ಸ್ಪೆಕ್ಟರ್ ಬಿ.ಕೆ. ಪ್ರಕಾಶ ಅವರು ಕೂಡಲೇ ಧಾವಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಬೋಗಿಯೊಳಗೆ ತಳ್ಳಿದ್ದಾರೆ. ಇದರಿಂದಾಗಿ ಅನಹುತ ತಪ್ಪಿದೆ.

ರೈಲ್ವೆ ನಿಲ್ದಾಣದ ಸಿಸಿಟಿವಿ ಕ್ಯಾಮರಾಗಳಲ್ಲಿ ದೃಶ್ಯ ಸೆರೆಯಾಗಿದೆ. ಇನ್‌ಸ್ಪೆಕ್ಟರ್ ಬಿ.ಕೆ. ಪ್ರಕಾಶ ಅವರು ದೂರದಿಂದ ಓಡಿ ಬಂದು ಪ್ರಯಾಣಿಕನರ ಜೀವ ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ಕೆಳಗಿದೆ:
