ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಸಾಗರ ರಸ್ತೆಯ ಪಂಪಾ ನಗರದಲ್ಲಿರುವ ಕಚೇರಿಯಲ್ಲಿ ನಡೆಯಲಿರುವ ಈ ನೇರ ಸಂದರ್ಶನದಲ್ಲಿ ಖಾಸಗಿ ವಲಯದ ಪ್ರತಿಷ್ಠಿತ ಕಂಪನಿಗಳಾದ NIDEC ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು NTTF ಪ್ರೈವೇಟ್ ಲಿಮಿಟೆಡ್ ಭಾಗವಹಿಸಲಿವೆ. ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಯಾರೆಲ್ಲ ಭಾಗವಹಿಸಬಹುದು?
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು 18 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶವಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ (ಎಲೆಕ್ಟ್ರಿಕಲ್, ಎಲೆಕ್ಟ್ರಿಷಿಯನ್, ಎಲೆಕ್ಟ್ರೋ & ಮೆಕಾನಿಕಲ್, ಮೆಕಾನಿಕಲ್, ಫಿಟ್ಟರ್, ಟರ್ನರ್) ಹಾಗೂ ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ & ಕಮ್ಯೂನಿಕೇಷನ್ ಪದವಿ ಪೂರೈಸಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಆಸಕ್ತರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9380663606 ಅಥವಾ 9108235132 ಅನ್ನು ಸಂಪರ್ಕಿಸಬಹುದು.
