ಹೆದ್ದಾರಿಗೆ ಅಡ್ಡ ಬಿದ್ದ ಮರ, ಸಾಗರ – ಶಿವಮೊಗ್ಗ ಮಧ್ಯೆ ವಾಹನ ಸಂಚಾರಕ್ಕೆ ಅಡಚಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ: ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿ 69ರ ಯಡೆಹಳ್ಳಿ ಪೆಟ್ರೋಲ್ ಬಂಕ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಶಿವಮೊಗ್ಗ – ಸಾಗರ ನಡುವೆ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ರಸ್ತೆಗೆ ಬಿದ್ದಿರುವ ಮರ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಅನಿವಾರ್ಯವಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಸಾಗರ ಕಡೆಯಿಂದ ಶಿವಮೊಗ್ಗಕ್ಕೆ ಪ್ರಯಾಣಿಸುವವರು ರಿಪ್ಪನ್‌ಪೇಟೆ-ಆಯನೂರು ಮಾರ್ಗವಾಗಿ ಸಂಚರಿಸಬೇಕು. ಹಾಗೆಯೇ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುವ ಪ್ರಯಾಣಿಕರು ಆಯನೂರು-ರಿಪ್ಪನ್‌ಪೇಟೆ-ಆನಂದಪುರ ಮಾರ್ಗವನ್ನು ಬಳಸುವಂತೆ ಆನಂದಪುರ ಪಿಎಸ್‌ಐ ತಿಳಿಸಿದ್ದಾರೆ. ಮರ ತೆರವು ಕಾರ್ಯಾಚರಣೆ ಬಳಿಕ ಈ ಮಾರ್ಗದಲ್ಲಿ ವಾಹನ ಸಂಚಾರ ಪುನಾರಂಭವಾಗಲಿದೆ.

Tree-Falls-on-Shimoga-Sagara-Highway-Road-near-yadehalli