ಮಕ್ಕಳಿಗೆ ಪ್ರಶಸ್ತಿ, ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು?

ಶಿವಮೊಗ್ಗ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2026ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ಸಾಧಕ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಧೈರ್ಯ, ಸಾಹಸ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರು ಇಲಾಖೆಯ ವೆಬ್‌ಸೈಟ್ https://awards.gov.in ಮೂಲಕ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ತಿಳಿಸಿದ್ದಾರೆ.

SHIMOGA-NEWS-GRAPHICS-BY-SHIVAMOGGA-LIVE

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಅಥವಾ ದೂರವಾಣಿ ಸಂಖ್ಯೆ: 08182-295709 ಅನ್ನು ಸಂಪರ್ಕಿಸಬಹುದಾಗಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp