ಹವಾಮಾನ ವರದಿ: ರಾಜ್ಯಾದ್ಯಂತ ಜೂನ್ 2 ರಿಂದ 5 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಿದೆ.
ಎಲ್ಲೆಲ್ಲಿ ಹೇಗಿರುತ್ತೆ ಮಳೆ?
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಜೂನ್ 2 ರಿಂದ 6 ರವರೆಗೆ ಗಂಟೆಗೆ 40–50 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡಿನಲ್ಲಿ ಜೂನ್ 2 ರಿಂದ 5 ರವರೆಗೆ ಗಂಟೆಗೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ಭಾಗಗಳಲ್ಲಿ ಜೂನ್ 2 ರಿಂದ 4 ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
