ತೀರ್ಥಹಳ್ಳಿ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ.
ತೀರ್ಥಹಳ್ಳಿ ತಾಲೂಕು ಮುಡುಬಾ ಸಮೀಪ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ತೀರ್ಥಹಳ್ಳಿಗೆ ಸಂಚರಿಸುತ್ತಿತ್ತು. ಮುಡುಬಾ ಸಮೀಪ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರೆಗೆ ಹೋಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
