ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮ, 500 ಜನಕ್ಕೆ ಹಯಗ್ರೀವ, ಅನ್ನಪ್ರಸಾದ, ಯಾಕೆ?

ಶಿವಮೊಗ್ಗ: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಹಯಗ್ರೀವ ಪ್ರಸಾದ ಹಾಗೂ ಅನ್ನದಾನ ಮಾಡಲಾಯಿತು.

ನಗರದ ಕೆಳದಿ ಶಿವಪ್ಪ ನಾಯಕ ಪ್ರತಿಮೆ ಮುಂಭಾಗ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಅನ್ನದಾನಕ್ಕು ಮೊದಲು ಪಟಾಕಿ ಸಿಡಿಸಿ ಘೋಷಣೆ ಕೂಗಿದರು.

030626 Devendrappa celebration after dk shivakumar becoming cm

500ಕ್ಕೂ ಹೆಚ್ಚು ಜನರಿಗೆ ಹಯಗ್ರೀವ ಪ್ರಸಾದ ಹಾಗೂ ಅನ್ನಪ್ರಸಾದ ವಿತರಿಸಲಾಯಿತು ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ತಿಳಿಸಿದರು.

ಈ ಸಂದರ್ಭ ಹೆಚ್.ಸಿ.ಯೋಗೇಶ್, ಶಿವಕುಮಾರ್, ಕವಿತಾ ರಾಘವೇಂದ್ರ, ಸ್ಟೆಲ್ಲಾ ಮಾರ್ಟಿನ್ ಸೇರಿ ಹಲವರು ಇದ್ದರು.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp