ವಸತಿ ಯೋಜನೆ: ಅಲೆಮಾರಿ ಸಮುದಾಯದವರಿಂದ ಅರ್ಜಿ ಆಹ್ವಾನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಂದ ರಾಜೀವ್ ಗಾಂಧಿ ವಸತಿ ನಿಗಮದ ಸಹಯೋಗದೊಂದಿಗೆ ವಸತಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಆಸಕ್ತ ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯವಿರುವ ದೃಢೀಕೃತ ದಾಖಲಾತಿಗಳನ್ನು ಜೂನ್ 20ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Just-Mahithi-Update-Shimoga-News