NEWS HIGHLIGHTS
ಶಿವಮೊಗ್ಗ: ಆಲೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12ರಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ಜೂನ್ 5ರಂದು ಬೆಳಿಗ್ಗೆ 9ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೊಳ, ಎಸ್.ಎಲ್.ವಿ ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ, ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
